ಮಾರ್ಕ್ 7

ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.

Mark 7:1 (UKJV) Then came together unto him the Pharisees, and certain of the scribes, which came from Jerusalem.

1ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.

2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

Kannada Bible (Old Version), Bible Society of India.