ಮಾರ್ಕ್ 7

ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.

Mark 7:20 (UKJV) And he said, That which comes out of the man, that defiles the man.

18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?

19ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.

20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.

21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು

22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ

Kannada Bible (Old Version), Bible Society of India.