24ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
25ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
27ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.