ಮತ್ತಾಯ 13

ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.

Matthew 13:3 (UKJV) And he spoke many things unto them in parables, saying, Behold, a sower went forth to sow;

1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.

2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.

3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.

4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.

5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;

Kannada Bible (Old Version), Bible Society of India.