ಮತ್ತಾಯ 13

ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.

Matthew 13:49 (UKJV) So shall it be at the end of the world: the angels shall come forth, and sever the wicked from among the just,

47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

48ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.

49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.

50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.

Kannada Bible (Old Version), Bible Society of India.