ಮತ್ತಾಯ 13

ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

Matthew 13:7 (UKJV) And some fell among thorns; and the thorns sprung up, and choked them:

5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;

6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

8ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.

9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

Kannada Bible (Old Version), Bible Society of India.