ಮತ್ತಾಯ 18

ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

Matthew 18:30 (UKJV) And he would not: but went and cast him into prison, till he should pay the debt.

28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.

32ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.

Kannada Bible (Old Version), Bible Society of India.