3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು