10ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
11ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.