42ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.