ಮತ್ತಾಯ 23

ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

Matthew 23:12 (UKJV) And whosoever shall exalt himself shall be brought low; and he that shall humble himself shall be exalted.

10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.

11ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.

12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

Kannada Bible (Old Version), Bible Society of India.