4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.