19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.