34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.