15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
16ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
17ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.