28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.