65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ
66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.