67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.