1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.