ಮತ್ತಾಯ 3

ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.

Matthew 3:14 (UKJV) But John forbad him, saying, I have need to be baptized of you, and come you to me?

12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

13ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.

14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.

15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.

16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.

Kannada Bible (Old Version), Bible Society of India.