ಮತ್ತಾಯ 3

ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.

Matthew 3:3 (UKJV) For this is he that was spoken of by the prophet Isaiah, saying, The voice of one crying in the wilderness, Prepare all of you the way of the Lord, make his paths straight.

1ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--

2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.

4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.

5ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.

Kannada Bible (Old Version), Bible Society of India.