30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
34ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.