22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.