1ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
3ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
4ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
5ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.