ಮತ್ತಾಯ 8

ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

Matthew 8:23 (UKJV) And when he was entered into a ship, his disciples followed him.

21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.

22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.

23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.

25ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.

Kannada Bible (Old Version), Bible Society of India.