32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
33ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.
34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.