ಮಿಕ 3

ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,

Micah 3:2 (UKJV) Who hate the good, and love the evil; who pluck off their skin from off them, and their flesh from off their bones;

1ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?

2ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,

3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.

4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.

Kannada Bible (Old Version), Bible Society of India.