ಮಿಕ 5

ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

Micah 5:11 (UKJV) And I will cut off the cities of your land, and throw down all your strong holds:

9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

12ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.

Kannada Bible (Old Version), Bible Society of India.