ಮಿಕ 7

ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

Micah 7:18 (UKJV) Who is a God like unto you, that pardons iniquity, and passes by the transgression of the remnant of his heritage? he retains not his anger for ever, because he delights in mercy.

16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.

18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.

20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

Kannada Bible (Old Version), Bible Society of India.