1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.