ನಾಹೂಮು 1

ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.

Nahum 1:2 (UKJV) God is jealous, and the LORD revenges; the LORD revenges, and is furious; the LORD will take vengeance on his adversaries, and he reserves wrath for his enemies.

1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.

2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.

3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.

4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.

Kannada Bible (Old Version), Bible Society of India.