8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.