5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.