ನೆಹೆಮೀಯ 4

ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.

Nehemiah 4:2 (UKJV) And he spoke before his brethren and the army of Samaria, and said, What do these feeble Jews? will they fortify themselves? will they sacrifice? will they make an end in a day? will they revive the stones out of the heaps of the rubbish which are burned?

11 ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--

2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.

3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.

Kannada Bible (Old Version), Bible Society of India.