ನೆಹೆಮೀಯ 9

ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.

Nehemiah 9:35 (UKJV) For they have not served you in their kingdom, and in your great goodness that you gave them, and in the large and fat land which you gave before them, neither turned they from their wicked works.

33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.

34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.

35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.

36ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.

37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

Kannada Bible (Old Version), Bible Society of India.