ಗಣನೆ 10

ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.

Numbers 10:12 (UKJV) And the children of Israel took their journeys out of the wilderness of Sinai; and the cloud rested in the wilderness of Paran.

10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.

11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.

12ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.

13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.

14ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.

Kannada Bible (Old Version), Bible Society of India.