33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.
36ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.