13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.
16ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.