ಗಣನೆ 14

ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.

Numbers 14:42 (UKJV) Go not up, for the LORD is not among you; that all of you be not smitten before your enemies.

40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.

41ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.

42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.

43ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.

44ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.

Kannada Bible (Old Version), Bible Society of India.