ಗಣನೆ 18

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

Numbers 18:25 (UKJV) And the LORD spoke unto Moses, saying,

23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.

24ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.

25ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.

Kannada Bible (Old Version), Bible Society of India.