14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
16ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
17ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.