ಗಣನೆ 23

ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.

Numbers 23:2 (UKJV) And Balak did as Balaam had spoken; and Balak and Balaam offered on every altar a bullock and a ram.

1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.

2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.

3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.

Kannada Bible (Old Version), Bible Society of India.