17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.