21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.
25ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.