ಗಣನೆ 25

ಇಸ್ರಾಯೇಲ್‌ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.

Numbers 25:3 (UKJV) And Israel joined himself unto Baalpeor: and the anger of the LORD was kindled against Israel.

1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.

2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.

3ಇಸ್ರಾಯೇಲ್‌ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.

4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.

5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.

Kannada Bible (Old Version), Bible Society of India.