11 ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
3ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.