20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
21ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.
22ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
23ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.
24ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.