44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
46ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
48ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.