37ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
38ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.
39ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
40ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.
41ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.