ಗಣನೆ 35

ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

Numbers 35:17 (UKJV) And if he strike him with throwing a stone, wherewith he may die, and he die, he is a murderer: the murderer shall surely be put to death.

15ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್‌ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.

16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

17ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.

Kannada Bible (Old Version), Bible Society of India.